ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ತಿಳಿಸಲಾದಂತಹ ಇದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸಿತು. ಐದು ಗ್ಯಾರಂಟಿ ಯೋಜನೆಗಲ್ಲಿ ಮುಖ್ಯ ಗ್ಯಾರಂಟಿ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದೆ.
ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ ಯೋಜನೆಯಾಗಿದ್ದು ಇದೊಂದು ಮಹಿಳಾ ಸಬಲೀಕರಣ ಯೋಜನೆ ಎಂದು ಹೇಳಿದರು ತಪ್ಪಾಗಲಾರದು. ಪಡಿತರ ಕಾರ್ಡ್ ಹೊಂದಿರುವಂತಹ ಕುಟುಂಬದ ಯಜಮಾನನಿಗೆ ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣವನ್ನು ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆ.
ಈ ಯೋಜನೆಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವಂತಹ ಕುಟುಂಬದ ಯಜಮಾನರು ಅರ್ಹರಾಗಿರುತ್ತಾರೆ. ವರಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ರೇಷನ್ ಕಾರ್ಡ್ ನಲ್ಲಿನ ನಮೂದಿಸಿರುವ ಮನೆಯ ಯಜಮಾನಿಯನ್ನು ಪರಿಗಣಿಸಲಾಗುತ್ತದೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆ ಜಾರಿಗೆ ಒಂದು ವರ್ಷ ಕಳೆದಿತ್ತು ಗೃಹಲಕ್ಷ್ಮಿ ಯೋಜನೆಯ ಒಂದು ವರ್ಷದ ಸಂಭ್ರಮದಲ್ಲಿ ರಾಜ್ಯ ಸರ್ಕಾರವಿದೆ.
ಗೃಹಲಕ್ಷ್ಮಿ ಯೋಜನೆಯ ಮುಖ್ಯ ಉದ್ದೇಶಗಳು :
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶ ಏನೆಂಬುದರ ಬಗ್ಗೆ ಈ ಕೆಳಗಿನಂತೆ ನೋಡುವುದಾದರೆ,
- ಆರ್ಥಿಕವಾಗಿ ಮಹಿಳೆಯರ ಸಬಲೀಕರಣ : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಈ ಒಂದು ಯೋಜನೆಯನ್ನು ಹಮ್ಮಿಕೊಂಡಿದೆ.
- ಕುಟುಂಬದ ನಿರ್ವಹಣೆಗೆ ಸಹಾಯ : ಮನೆ ಒಡತಿಯ ಪಾತ್ರ ಪ್ರತಿ ಕುಟುಂಬದ ನಿರ್ವಹಣೆಯಲ್ಲಿ ಬಹು ಮುಖ್ಯವಾಗಿರುತ್ತದೆ. ಆದ್ದರಿಂದ ಆರ್ಥಿಕವಾಗಿ ಮನೆಯ ಯಜಮಾನಿ ಸಬಲೀಕರಣಗೊಂಡರೆ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿ ಇರುತ್ತದೆ ಎಂಬುದು ಸರ್ಕಾರದ ಅಭಿಪ್ರಾಯವಾಗಿದೆ ಆದ್ದರಿಂದ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ.
25,248 ಕೋಟಿ ಫಲಾನುಭವಿಗಳ ಖಾತೆಗೆ ಜಮಾ :
ಮೈಸೂರಿನಲ್ಲಿ 2023ರ ಆಗಸ್ಟ್ 30 ರಂದು ನಡೆದಂತಹ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು.
ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದ್ದು ಪ್ರತಿ ತಿಂಗಳು 2000ಗಳ ಹಣವನ್ನು ಗೃಹಣಿಯರಿಗೆ ನೀಡುವ ಈ ಯೋಜನೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದುವರೆಗೂ 25,248 ಕೋಟಿ ರೂಪಾಯಿಗಳ ಹಣವನ್ನು ಜಮಾ ಮಾಡಿದೆ. ಇದರ ಪ್ರಯೋಜನವನ್ನು ಸರ್ಕಾರದ ಪ್ರತಿಯೊಬ್ಬ ಮಹಿಳೆಯರು ಕೂಡ ಪಡೆದುಕೊಳ್ಳುತ್ತಿದ್ದಾರೆ.
ಹಲವು ಪಾವತಿದಾರರಿಗೆ ಈ ಯೋಜನೆಯ ಸೌಲಭ್ಯ ರದ್ದು :
ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಫಲಾನುಭವಿಗಳಿಗೆ ಅವಕಾಶವಿದೆ. ಬಿಪಿಎಲ್ ಎಪಿಎಲ್ ಮತ್ತು ಹಂಚೋದಯ ಪಡಿತರ ಚೀಟಿ ಹೊಂದಿರುವಂತಹ ಕುಟುಂಬದ ಯಜಮಾನಿಗೆ ಮಾತ್ರ ಈ ಯೋಜನೆಯ ಪ್ರಯೋಜನ ಸಿಗಲಿದೆ.
ಈ ಯೋಜನೆಯ ಪ್ರಯೋಜನ ಪಡೆಯದಂತೆ ಆದಾಯ ತೆರಿಗೆ ಜಿಎಸ್ಟಿ ಪಾವತಿದಾರರು ಸೇರಿದಂತೆ ಶ್ರೀಮಂತರಿಗೆ ನಿಯಮಾವಳಿಗಳನ್ನು ರೂಪಿಸಲಾಗಿದೆ.
ಇದನ್ನು ಓದಿ : ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಜಾರಿ
ಯಾವಾಗ ಜೂನ್ ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಬರಲಿದೆ ?
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭ ಮಾಡಿ ಒಂದು ವರ್ಷದ ಸಂಭ್ರಮದಲ್ಲಿ ಇರುವಂತಹ ಸಂದರ್ಭದಲ್ಲಿ ಈಗಾಗಲೇ ಹಲವಾರು ಜಿಲ್ಲೆಯ ಮಹಿಳೆಯರಿಗೆ ಜೂನ್ ತಿಂಗಳ ಹಣವನ್ನು ಜಪ ಮಾಡಲಾಗಿದೆ ಎಂಬ ವಿಷಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಕೆಲವೊಂದು ತಾಂತ್ರಿಕ ದೋಷಗಳಿಂದಾಗಿ ಹಣ ಜಮಾ ಆಗೋದು ತಡವಾಗಿದ್ದರೂ ಕೂಡ ಇದೀಗ ಎಲ್ಲಾ ಸಮಸ್ಯೆಗಳು ಬಗೆಹರಿದಿದೆ.
ಎಲ್ಲ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಂಪೂರ್ಣವಾಗಿ ಜೂನ್ ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಜಮಾ ಆಗಲಿದೆ. ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂಬ ಭರವಸೆಯನ್ನು ಕೂಡ ಫಲಾನುಭವಿಗಳಿಗೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಫಲಾನುಭವಿಗಳ ಪಟ್ಟಿ :
28608 ಕೋಟಿ ರೂಪಾಯಿಗಳ ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟಿದ್ದು ಹಣಕಾಸು ಮುಖಟ್ಟು ಗೃಹಲಕ್ಷ್ಮಿ ಯೋಜನೆಗೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. 9.83 ಲಕ್ಷ ಫಲಾನುಭವಿಗಳು ಬೆಳಗಾವಿ ಜಿಲ್ಲೆಯಲ್ಲಿದ್ದು ಪ್ರಥಮ ಸ್ಥಾನದಲ್ಲಿ ಬೆಳಗಾವಿ ಜಿಲ್ಲೆ ಇದೆ. 1.15 ಲಕ್ಷ ಫಲಾನುಭವಿಗಳು ಕೊಡಗು ಜಿಲ್ಲೆಯಲ್ಲಿದೆ ಕೊನೆಯ ಸ್ಥಾನದಲ್ಲಿದೆ. 8.20 ಲಕ್ಷ ಫಲಾನುಭವಿಗಳು ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ.
ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು :
ರಾಜ್ಯ ಸರ್ಕಾರವು ಲಕ್ಷ್ಮೀ ಯೋಜನೆ ಜಾರಿಗೆ ತಂದು ಈಗಾಗಲೇ ಬಂದು ವರ್ಷ ಕಳೆದಿದೆ. ಈಗ ಗಳಿಗೆ ಏಳನೇ ಕಂತಿನ 14,000ಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಅರ್ಹ ಫಲಾನುಭವಿಗಳಿಗೆ ಜಮಾ ಮಾಡಲಾಗಿದೆ.
ಒಂದು ವೇಳೆ ಈ ಯೋಜನೆಗೆ ನೀವು ಕೂಡ ಅರ್ಹರಾಗಿದ್ದರೆ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಈಗಲೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟಾರೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ಯಶಸ್ವಿಯಾಗಿ ಒಂದು ವರ್ಷ ಕಳೆದಿದ್ದು ಇದರ ಪ್ರಯೋಜನವನ್ನು ರಾಜ್ಯದಲ್ಲಿರುವ ಸಾಕಷ್ಟು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ.
ಹಾಗಾಗಿ ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಅರ್ಹ ಮಹಿಳೆಯರು ಸಲ್ಲಿಸಬಹುದು ಎಂಬುದರ ಈ ಮಾಹಿತಿಯನ್ನು ಎಲ್ಲಾ ಮಹಿಳೆಯರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಆಧಾರ್ ಕಾರ್ಡ್ ಹೊಂದಿರುವವರಿಗೆ ಕೊನೆಯ ಅವಕಾಶ..!
- ರಾಜ್ಯದ ರೈತರಿಗೆ ಗಣೇಶ ಹಬ್ಬದ ಬಂಪರ್ ಗಿಫ್ಟ್! ಕೇಂದ್ರದಿಂದ ಮಹತ್ವದ ಘೋಷಣೆ