ಹಲೋ ಸ್ನೇಹಿತರೇ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ 2000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿತ್ತು.
ಮೊದಲ ಹಂತದಲ್ಲಿ 1419 ಸರ್ಕಾರಿ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚಿಸಲಾಗಿದೆ.
ಇದನ್ನೂ ಸಹ ಓದಿ : ಆಧಾರ್ ಕಾರ್ಡ್ ಹೊಂದಿರುವವರಿಗೆ ಕೊನೆಯ ಅವಕಾಶ!
ಅಗತ್ಯವಿರುವ ಶಿಕ್ಷಕರು, ಅತಿಥಿ ಉಪನ್ಯಾಸಕರ ಸೇವೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಜನಪ್ರತಿನಿಧಿಗಳು, ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಗಳು, ಅಧಿಕಾರಿಗಳಿಂದ ಆಂಗ್ಲ ಭಾಷಾ ಮಾಧ್ಯಮ ಬೋಧನೆಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಇನ್ನು ಹೆಚ್ಚಿನ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗುವುದು.
ಬೆಂಗಳೂರು ವಲಯದಲ್ಲಿ 126, ಧಾರವಾಡ ವಲಯದಲ್ಲಿ 165, ಮೈಸೂರು ವಲಯದಲ್ಲಿ 82 ಶಾಲೆಗಳನ್ನು ಆರಂಭಿಸಲಾಗುವುದು. ಬೆಂಗಳೂರು ನಗರಕ್ಕೆ ನಾಲ್ಕು ಶಾಲೆ ನೀಡಲಾಗಿದ್ದು ಉಳಿದ 122 ಶಾಲೆಗಳನ್ನು ಕೋಲಾರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ.
ಇತರೆ ವಿಷಯಗಳು:
18 ವರ್ಷದೊಳಗಿನ ಮಕ್ಕಳಿ ಗುಡ್ ನ್ಯೂಸ್: ಸರ್ಕಾರದಿಂದ ಹೊಸ ಯೋಜನೆ ಘೋಷಣೆ
ರಾಜ್ಯದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ 6 ದಿನ ರಜೆ ಘೋಷಣೆ!
ಇನ್ಮುಂದೆ 1.78 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಪಾವತಿ ಕಟ್!