ನಮಸ್ಕಾರ ಸ್ನೇಹಿತರೆ ಸಾಕಷ್ಟು ಜನರು ವ್ಯವಹಾರ ಅಧ್ಯಯನದಲ್ಲಿ ಆಸಕ್ತಿ ಹೊಂದಿದ್ದು ಅದರ ಬಗ್ಗೆ ಹೆಚ್ಚು ಓದಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಉದ್ಯೋಗವನ್ನು ಪಡೆಯಬೇಕೆಂದು ಬಯಸುತ್ತಿರುತ್ತಾರೆ. ಅಂಥವರು ಈ ಲೇಖನದಲ್ಲಿ ತಿಳಿಸಲಾಗುತ್ತಿರುವಂತಹ ಮಾಹಿತಿಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕೆಂದುಕೊಂಡಿರುವ ಯುವಕ ಯುವತಿಯರಿಗೆ ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಫೆಡರಲ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿಯನ್ನು ಈ ಲೇಖನವನ್ನು ಓದುವುದರ ಮೂಲಕ ತಿಳಿದುಕೊಳ್ಳಬಹುದು.
ಫೆಡರಲ್ ಬ್ಯಾಂಕ್ ನೇಮಕಾತಿ :
ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಫೆಡರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯನ್ನು ಓದುವುದರ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಫೆಡರಲ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡಬಹುದು.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ಫೆಡರಲ್ ಬ್ಯಾಂಕ್ |
ಖಾಲಿ ಇರುವ ಹುದ್ದೆಯ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
PDF ನೋಡಲು | ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | https://www.federalbank.co.in/ |
ಉದ್ಯೋಗದ ಸ್ಥಳ | ಅಖಿಲ ಭಾರತ |
ಶೈಕ್ಷಣಿಕ ಅರ್ಹತೆ :
ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕೆಂದು ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಸ್ನಾತಕೋತ್ತರ ಪದವಿ
ವಯಸ್ಸಿನ ಮಿತಿ :
ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಆಫೀಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು 01-06-2024 ರಂತೆ ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಅನ್ವಯ,
- ಗರಿಷ್ಠ ವಯಸ್ಸು : 27 ವರ್ಷಗಳು
ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದೆ.
- SC&ST ಅಭ್ಯರ್ಥಿಗಳಿಗೆ : 5 ವರ್ಷಗಳು
ಅರ್ಜಿ ಶುಲ್ಕದ ವಿವರ :
ಫೆಡರಲ್ ಬ್ಯಾಂಕ್ ನ ಆಫೀಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಈ ಅರ್ಜಿ ಶುಲ್ಕವು ವರ್ಗಗಳಿಗೆ ಅನುಸಾರವಾಗಿ ಇರುತ್ತದೆ.
- 700 ರೂಪಾಯಿ : ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ
- 140 ರೂಪಾಯಿ : SC &ST ಅಭ್ಯರ್ಥಿಗಳಿಗೆ
ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು.
ವೇತನ ಶ್ರೇಣಿ :
ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು48,480-85,920 ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : DHFWS Recruitment : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ನೇಮಕಾತಿ
ಆಯ್ಕೆಯ ವಿಧಾನ :
ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಆನ್ಲೈನ್ ಆಪ್ಟಿಟ್ಯೂಡ್ ಪರೀಕ್ಷೆ.
- ಗುಂಪು ಚರ್ಚೆ.
- ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಫೆಡರಲ್ ಬ್ಯಾಂಕ್ ನೇಮಕಾತಿ ಅಧಿ ಸೂಚನೆಯ ಪ್ರಕಾರ ಆಫೀಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಫೆಡರಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ಫೆಡರಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ : https://www.federalbank.co.in/
ಪ್ರಮುಖ ದಿನಾಂಕಗಳು :
ಅಖಿಲ ಭಾರತದದ್ಯಾಂತ ಇರುವಂತಹ ಫೆಡರಲ್ ಬ್ಯಾಂಕುಗಳಲ್ಲಿ ಆಫೀಸರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು,
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ : 31-07-2024
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 12-08-2024
ಒಟ್ಟಾರೆ ಭಾರತದ ವಿವಿಧ ಪ್ರದೇಶಗಳಲ್ಲಿ ತನ್ನ ಶಾಖೆಗಳನ್ನು ಹೊಂದಿರುವಂತಹ ಫೆಡರಲ್ ಬ್ಯಾಂಕ್ ತನ್ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನ ಮಾಡಲಾಗಿದೆ.
ಹಾಗಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ಕಳೆಯಬೇಕೆಂದುಕೊಂಡಿರುವಂತಹ ಯುವಕ ಯುವತಿಯರಿಗೆ ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಉದ್ಯೋಗದ ಬಗ್ಗೆ ಶೇರ್ ಮಾಡಿ. ಇದರಿಂದ ಅವರು ಫೆಡರಲ್ ಬ್ಯಾಂಕ್ ನಲ್ಲಿ ಉದ್ಯೋಗವನ್ನು ಪಡೆದು ಭಾರತದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಲಿ ಧನ್ಯವಾದಗಳು.
ಇತರೆ ವಿಷಯಗಳು :
- BBMP Recruitment ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ
- ಸುಪ್ರೀಂ ಕೋರ್ಟ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್