ಹಲೋ ಸ್ನೇಹಿತರೇ, ರಾಜ್ಯಾದ್ಯಂತ ಮತ್ತು ರಾಜಾಧಾನಿ ಬೆಂಗಳೂರಿನಲ್ಲಿ ಬೆಲೆ ಏರಿಕೆಯಿಂದಾಗಿ ಜನರು ಶಾಕ್‌ನಲ್ಲಿದ್ದಾರೆ. ಈ ಮಧ್ಯೆ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಆಗಿದೆ. ಮಳೆಯಿಂದಾಗಿ ಬೆಳೆ ನಾಶ, ಉತ್ಪಾದನೆ ಕುಸಿತವೇ ಬೆಲೆ ಏರಿಕೆಗೆ ಮುಖ್ಯ ಕಾರಣ. ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ. ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಬೆಳೆ ನಾಶವಾಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.
ಈರುಳ್ಳಿ ಉತ್ಪಾದನೆ ಭಾರೀ ಕುಸಿತ
ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗುತ್ತಿದೆ.
ದಸರಾ ವೇಳೆಗೆ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ
ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.
ಇದನ್ನೂ ಸಹ ಓದಿ : ಅಂಚೆ ಕಚೇರಿ ಯೋಜನೆಯಲ್ಲಿ ಹೊಸ ನೀತಿ! ಅಕ್ಟೋಬರ್ 1 ರಿಂದ ಈ ರೂಲ್ಸ್ ಜಾರಿ
ಬೆಳ್ಳುಳ್ಳಿ ಬೆಲೆಯೂ ಏರಿಕೆ
ಈ ಮಧ್ಯೆ ಬೆಳ್ಳುಳ್ಳಿ ಕೆಜಿಗೆ 400 ರೂ. ಆಗಿದೆ. ತರಕಾರಿಗಳ ಬೆಲೆ ಕೂಡ ಕೊಂಚ ಜಾಸ್ತಿಯಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ತರಕಾರಿ ಹಾಗೂ ಈರುಳ್ಳಿಯ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಅಂತ ವ್ಯಾಪಾರಸ್ಥರು ಅಂದಾಜಿಸಿದ್ದಾರೆ.
ಒಟ್ಟಿನಲ್ಲಿ ಮಳೆಯ ಕಾರಣದಿಂದಾಗಿ ಈರುಳ್ಳಿ ಬೆಲೆ ಒಂದೇ ವಾರದಲ್ಲಿ 60 ರಿಂದ 70 ರೂ. ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಇತರೆ ವಿಷಯಗಳು:
ಈ ಕೆಲಸ ಮಾಡದಿದ್ದರೆ ನಿಮಗೆ ಬರಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ!
ಮಹಿಳೆಯರಿಗೆ ಸಂತಸದ ಸುದ್ದಿ.!! ಕೇಂದ್ರ ಸರ್ಕಾರದಿಂದ ಸಿಗಲಿದೆ 11,000 ರೂ.
ರೈತರಿಗೆ ಸಂತಸದ ಸಿಹಿ ಸುದ್ದಿ.!! ಮೋದಿ ಸರ್ಕಾರದಿಂದ ಬಿಗ್ ಅಪ್ಡೇಟ್